ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.10;

2019ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಈ ಬಾರಿ ಕನ್ನಡಕ್ಕೆ 11 ಪ್ರಶಸ್ತಿ ಸಿಕ್ಕಿವೆ. ಅದರಲ್ಲೂ ಅತಿಹೆಚ್ಚು ಪ್ರಶಸ್ತಿಯನ್ನು ಶ್ರುತಿ ಹರಿಹರನ್ ಅಭಿನಯದ, ಮನ್ಸೂರೆ ನಿರ್ದೇಶನದ ನಾತಿಚರಾಮಿ ಸಿನಿಮಾ ಬಾಚಿಕೊಂಡಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್, ಶೃತಿ ಹರಿಹರನ್ ಅಭಿನಯದ ನಾತಿಚರಾಮಿ ಚಿತ್ರಗಳು ಸೇರಿದಂತೆ ಕನ್ನಡಕ್ಕೆ ಒಟ್ಟು 11 ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ವರ್ಷದಲ್ಲಿ ಇಷ್ಟು ಪ್ರಶಸ್ತಿಗಳು ಬಂದಿರುವುದು ಇದೇ ಮೊದಲು.

ಪ್ರತಿಷ್ಠಿತ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ನವದೆಹಲಿಯಲ್ಲಿ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದರು.

ಪ್ರಾದೇಶಿಕ ವಿಭಾಗದಲ್ಲಿ ಶ್ರುತಿ ಹರಿಹರನ್ ಅಭಿನಯದ ನಾತಿಚರಾಮಿ ಅತ್ಯುತ್ತಮ ಸಿನಿಮಾವಾಗಿ ಹೊರಹೊಮ್ಮಿದೆ. ಅತ್ಯುತ್ತಮ ಆಕ್ಷನ್ ಸಿನಿಮಾ ಕೆಜಿಎಫ್ ಆಯ್ಕೆಯಾಗಿದೆ. ಉಳಿದಂತೆ ಪ್ರಶಸ್ತಿ ಗೆದ್ದು ಬೀಗಿದ ಸಿನಿಮಾಗಳ ಪಟ್ಟಿ ಹೀಗಿದೆ.

 • ಅತ್ಯುತ್ತಮ ಪ್ರಾದೇಶಿಕ ಚಿತ್ರ – ನಾತಿಚರಾಮಿ
 • ಅತ್ಯುತ್ತಮ ಮಹಿಳಾ ಗಾಯಕಿ (ಮಾಯಾವಿ ಮಾನವೆ ಹಾಡು) (ಬಿಂಧು ಮಾಲಿನಿ ಗಾಯಕಿ) – ನಾತಿಚರಾಮಿ
 • ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ – ನಾತಿಚರಾಮಿ
 • ಅತ್ಯುತ್ತಮ ಸಂಕಲನ – ನಾತಿಚರಾಮಿ
 • ಅತ್ಯುತ್ತಮ ಸಾಹಸ ಚಿತ್ರ – ಕೆಜಿಎಫ್
 • ಅತ್ಯುತ್ತಮ ವಿಎಫ್ ಎಕ್ಸ್ ಚಿತ್ರ – ಕೆಜಿಎಫ್
 • ಅತ್ಯುತ್ತಮ ರಾಷ್ಟ್ರೀಯ ಏಕತಾ ಚಿತ್ರ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಬಾಲ ಕಲಾವಿದ – ಒಂದಲ್ಲ, ಎರಡಲ್ಲ
 • ಅತ್ಯುತ್ತಮ ಮಕ್ಕಳ ಚಿತ್ರ – ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೂಡು
 • ಅತ್ಯುತ್ತಮ ರಾಷ್ಟ್ರೀಯ ಆಕ್ರ್ಸೂಸ್ ಚಿತ್ರ – ಮೂಕಜ್ಜಿಯ ಕನಸುಗಳು
 • ನಾತಿಚರಾಮಿ ಚಿತ್ರದ ಅಭಿನಯಕ್ಕಾಗಿ ನಟಿ ಶೃತಿ ಹರಿಹರನ್ ಗೆ ವಿಶೇಷ ಪ್ರಶಸ್ತಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.