ಕೆ.ಎನ್.ಪಿ.ವಾರ್ತೆ,ರಾಯಚೂರು,ಏ.26;

ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಪ್ರಮುಖ ಆರೋಪಿ ಸುದರ್ಶನ್‌ ಯಾದವ್‌ನನ್ನು ಸಿಐಡಿ ವಶಕ್ಕೆ ಒಪ್ಪಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ನಗರದ ಜೆಎಂಎಫ್‌ಸಿ ಮೂರನೇ ನ್ಯಾಯಾಲಯ, ನ್ಯಾಯಾಂಗ ವಶದಲ್ಲಿದ್ದ ಆರೋಪಿ ಸುದರ್ಶನ್‌ನನ್ನು ಸಿಐಡಿ ವಿಚಾರಣೆಗೆ ಒಪ್ಪಿಸಿ ಆದೇಶ ನೀಡಿದೆ.

ಹತ್ತು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಆದರೆ ನಾಲ್ಕು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಲಾಗಿದೆ.

ಜಿಲ್ಲಾ ಕಾರಾಗೃಹದಿಂದ ನಾಲ್ಕು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ. ಸಿಐಡಿ ಎಸ್.ಪಿ.ಶರಣಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಮಂಗಳವಾರ ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಆರೋಪಿಯ ಸ್ನೇಹಿತರ ವಿಚಾರಣೆ ನಡೆಸಿ ಮಾಹಿತಿ ಪಡೆದಿದ್ದಾರೆ. ನಿನ್ನೆ ಆರೋಪಿಯನ್ನ ರಿಮ್ಸ್ ಆಸ್ಪತ್ರೆಯಲ್ಲಿ ಪುನಃ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವಿಚಾರಣೆ ಮುಂದುವರಿಸಿದ್ದಾರೆ.

ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆ ನ್ಯಾಯಕ್ಕಾಗಿ ರಾಯಚೂರಿನಲ್ಲಿ ಹೋರಾಟಗಳು ನಿರಂತರವಾಗಿ ನಡೆದಿವೆ. ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.