ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.30;

ರಾಕಿಂಗ್ ಸ್ಟಾರ್ ಯಶ್ ಅಭಿನಯದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಸಿನಿಮಾ ‘ಕೆಜಿಎಫ್’ ಪ್ರಪ್ರಥಮ ಬಾರಿಗೆ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲಿದೆ.

100 ಕೋಟಿ ಕ್ಲಬ್ ಸೇರಿದ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೆಜಿಎಫ್ ಸದ್ಯದಲ್ಲೇ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಆದರೆ ಕೆಜಿಎಫ್ ಬರ್ತಿರೋದು ಕನ್ನಡದಲ್ಲಿ ಅಲ್ಲ. ಹಿಂದಿ ಕಿರುತೆರೆಯಲ್ಲಿ. ಹಿಂದಿಯ ಸೋನಿ ಮ್ಯಾಕ್ಸ್ ಚಾನೆಲ್ ನಲ್ಲಿ ಶೀಘ್ರದಲ್ಲೇ ಕೆಜಿಎಫ್ ಸಿನಿಮಾ ತೆರೆ ಕಾಣಲಿದೆ.

ಸೋನಿ ಮ್ಯಾಕ್ಸ್ ನಲ್ಲಿ ಪ್ರಸಾರ :

ಗರಿಷ್ಠ ಬೆಲೆಗೆ ಸೇಲ್ ಆಗಿದ್ದ ಕೆಜಿಎಫ್ ಸಿನಿಮಾ ಈಗ ಸೋನಿ ಮ್ಯಾಕ್ಸ್ ನಲ್ಲಿ ಪ್ರಸಾರವಾಗ್ತಿದೆ. ಈಗಾಗಲೇ ಕೆಜಿಎಫ್ ಪ್ರೋಮೋ ಟೆಲಿಕಾಸ್ಟ್ ಮಾಡ್ತಿರುವ ಟಿವಿ ವಾಹಿನಿ, ಅತಿ ಶೀಘ್ರದಲ್ಲಿ ಎಂದು ಜಾಹೀರಾತು ನೀಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಫೆಬ್ರವರಿಯಲ್ಲಿ ಸಿನಿಮಾ ಪ್ರದರ್ಶನವಾಗಲಿದೆ.

ಕೆಜಿಎಫ್ ಐದು ಭಾಷೆಗೆ ಡಬ್ ಆಗಿತ್ತು. ಇದೀಗ ಹಿಂದಿ ಅವತರಣಿಕೆ ಟಿವಿಯಲ್ಲಿ ಪ್ರಸಾರವಾಗುತ್ತಿರುವುದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಡುಗಡೆಯಾಗಿ ಇನ್ನೂ ಮೂರು ತಿಂಗಳು ಕಳೆದಿಲ್ಲ. ಆಗಲೇ ಕಿರುತೆರೆಯಲ್ಲಿ ಪ್ರಸಾರ ಮಾಡಬಾರದಿತ್ತು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಅದೇನೇ ಇದ್ದರೂ ಟಿವಿಯಲ್ಲಿ ಪ್ರಸಾರವಾಗುತ್ತಿರುವುದು ಪಕ್ಕಾ ಆಗಿದೆ.

ಕಳೆದ ಡಿಸೆಂಬರ್ 21 ರಂದು ಐದು ಭಾಷೆಯಲ್ಲಿ ಕೆಜಿಎಫ್ ಚಾಪ್ಟರ್ 1 ಬಿಡುಗಡೆಯಾಗಿತ್ತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ರಿಲೀಸ್ ಆಗಿತ್ತು. ಕಲೆಕ್ಷನ್ ನಲ್ಲಿ ಭಾರಿ ಗಳಿಕೆ ಕಂಡಿದ್ದ ಕೆಜಿಎಫ್ ಸ್ಯಾಂಡಲ್ ವುಡ್ ಇತಿಹಾಸದಲ್ಲಿ ಹೊಸ ದಾಖಲೆಗಳನ್ನ ನಿರ್ಮಿಸಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.