ಕೆ.ಎನ್.ಪಿ.ವಾರ್ತೆ,ನರೇಗಲ್ಲ,ಮೇ.24;

ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಿಂಗಳ ಸಾಹಿತ್ಯ ಚಿಂತನಾಗೋಷ್ಠಿಯನ್ನು ಪಟ್ಟಣದ ದರಗಾದಲ್ಲಿ ಮೇ 25 ರ ಶನಿವಾರ ಸಂಜೆ 5:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಹಿರೇಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ದರಗಾದ ಸಯ್ಯದ್ ಮಂಜೂರ ಹುಸೇನ ಶ್ಯಾವಲಿ ಅಜ್ಜನವರು ವಹಿಸಲಿದ್ದು, ರಾಂಪುರ ಸರ್ಕಾರಿ ಶಾಲೆಯ ಶಿಕ್ಷಕ ಕೆ.ಜಿ.ಸಂಗಟಿ ಅವರು ‘ಸೂಫಿ ಹಾಗೂ ಶರಣರ ಕೊಡುಗೆಗಳ’ ಕುರಿತು ಉಪನ್ಯಾಸ ನೀಡಲಿದ್ದಾರೆ.

ಕಸಾಪ ತಾಲ್ಲೂಕ ಅಧ್ಯಕ್ಷ ಐ.ಎ.ರೇವಡಿ, ಹೋಬಳಿ ಅಧ್ಯಕ್ಷ ಎಫ್.ಎನ್.ಹುಡೇದ, ದರಗಾ ಓಣಿಯ ಗುರು ಹಿರಿಯರು, ಭಕ್ತರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪಟ್ಟಣದ ಎಲ್ಲಾ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜರುಗಲಿದೆ ಎಂದು ಕಸಾಪ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.