ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12;
ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪದ್ಮಶ್ರೀ ಪ್ರೊ. ಗಣೇಶ ದೇವಿ ಹೇಳಿದರು.
ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ವಾಣಿಜ್ಯ ಶಾಸ್ತ್ರ ವಿಷಯದ ಸಹಾಯಕ ಪ್ರಾಧ್ಯಾಪಕರುಗಳಿಗೆ 21 ದಿನಗಳ ವೃತ್ತಿ ಬುನಾದಿ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಉತ್ತಮ ಸಮಾಜದ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ.
ಬದಲಾಗುತ್ತಿರುವ ಇಂದಿನ ಸಮಾಜದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ. ಮುಂದಿನ 30 ವರ್ಷಗಳಲ್ಲಿ ಸಮಾಜವೇ ಒಂದು ಶಿಕ್ಷಣ ಸಂಸ್ಥೆಯಾಗಿ ಪರಿವರ್ತನೆಯಾಗಲಿದೆ. ಅಲ್ಲಿ ಶಿಕ್ಷಕರೇ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದರು.
ಅಕ್ಷರತೆ, ಶಿಕ್ಷಣ ಮತ್ತು ಜ್ಞಾನವನ್ನು ಅಳವಡಿಸಿಕೊಳ್ಳುವುದು ಸಮಾಜದ ಒಂದು ಪ್ರಮುಖ ಅಂಶವಾಗಿದೆ. ಶಿಕ್ಷಕರಾದವರಿಗೆ ವಿದ್ಯಾರ್ಥಿಗಳ ಮನಸ್ಸನ್ನು ಪರಿವರ್ತಿಸಿ ಜ್ಞಾನಿಗಳಾಗಿ ಮಾಡುವ ಗುರುತರವಾದ ಜವಾಬ್ದಾರಿಯಿದೆ.
ಕ್ಲಾಸ್‍ರೂಮ್ ಬೋಧನೆ ಹೊರತುಪಡಿಸಿ ಬೋಧನೆ ಮಾಡುವುದು ಶಿಕ್ಷಕರ ಆದ್ಯ ಕರ್ತವ್ಯಗಳಲ್ಲೊಂದಾಗಿದೆ ಎಂದು ಉನ್ನತ ಶಿಕ್ಷಣ ಅಕಾಡೆಮಿಯ ನಿರ್ದೇಶಕ ಪ್ರೋ. ಎಸ್.ಎಮ್ ಶಿವಪ್ರಸಾದ ಆಶಯ ವ್ಯಕ್ತಪಡಿಸಿದರು.
ಡಾ ಅರುಂಧತಿ ಕುಲಕರ್ಣಿ ನಿರೂಪಿಸಿದರು. ಡಾ. ಎ.ಆರ್. ಜಗತಾಪ ವಂದಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿಯ ಡೀನ್ ಡಾ. ಆಯ್.ಬಿ. ಸಾತೀಹಾಳ, ಡಾ. ಎಚ್.ಬಿ. ನೀಲಗುಂದ, ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಮೂಲಿಮನಿ, ಸಾಗರ, ಕಿಶೋರ ಹಾಗೂ ಅಕಾಡೆಮಿಯ ಸಿಬ್ಬಂದಿ ಹಾಜರಿದ್ದರು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.