ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.02;

ಮಾತೆ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಪ್ರತಿ ವರ್ಷವೂ ಜ.3 ರಂದು ಶಾಲಾ ಕಾಲೇಜುಗಳಲ್ಲಿ ಆಚರಿಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಭಾರತದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಭಾರತದ ಇತಿಹಾಸದಲ್ಲಿ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ದಾಖಲಾಗಿದ್ದಾರೆ. ಪತಿ ಜ್ಯೋತಿಬಾಪುಲೆಯವರ ಜೊತೆ ಸೇರಿ ಮಹಿಳೆಯರ ಹಾಗೂ ಶೋಷಿತರ ಶಿಕ್ಷಣಕ್ಕಾಗಿ ಶ್ರಮಿಸಿದವರು.

1831 ಜನವರಿ 3ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕುಗ್ರಾಮದಲ್ಲಿ ಜನಿಸಿದ ಸಾವಿತ್ರಿ ಬಾಯಿ ಫುಲೆ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟವರು. ಮನೆಯಲ್ಲೆ ಶಾಲೆ ತೆರೆದು ಅಕ್ಷರ ಕ್ರಾಂತಿ ಕಹಳೆ ಊದಿದವರು.  

ಆದ್ದರಿಂದ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯಂದು ಅವರ ಭಾವಚಿತ್ರಕ್ಕೆ ಪುಷ್ಪ ಮಾಲೆ ಹಾಕಿ ಗೌರವ ಸಮರ್ಪಣೆ ಮಾಡಬೇಕು.

ಆ ಮೂಲಕ ಪ್ರಾರ್ಥನಾ ಸಮಯದಲ್ಲಿ ಮತ್ತು ಶಾಲಾ ಅವಧಿಯಲ್ಲಿ ಅವರ ಜೀವನಗಾಥೆ, ಸಾಧನೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಂತೆ ಇಲಾಖೆಯು ಆದೇಶ ಹೊರಡಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.