ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.28;

ಜನವರಿ 1 ರಿಂದ ಒಟಿಪಿ ಆಧಾರಿತ ವಿತ್ ಡ್ರಾ ವ್ಯವಸ್ಥೆ ಜಾರಿಗೆ ತರಲು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮುಂದಾಗಿದೆ.

ಇನ್ನು ಮುಂದೆ ಎಟಿಎಂಗಳಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಒನ್ ಟೈಮ್ ಪಾಸ್ ವರ್ಡ್ ನಮೂದಿಸಬೇಕು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೆ 10 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ವಿತ್ ಡ್ರಾ ಮಾಡುವವರಿಗೆ ಮಾತ್ರ ಈ ನಿಯಮ ಅನ್ವಯವಾಗಲಿದೆ.

ಎಟಿಎಂ ಕಾರ್ಡ್ ಗಳ ದುರುಪಯೋಗ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವಿಟರ್ ನಲ್ಲಿ ಬ್ಯಾಂಕ್ ಪ್ರಕಟಿಸಿದೆ.

ಎಟಿಎಂನಿಂದ ಹಣ ವಿತ್ ಡ್ರಾ ಮಾಡುವವರು ಎಟಿಎಂ ಯಂತ್ರದಲ್ಲಿ ತಮ್ಮ ಪಿನ್ ಸಂಖ್ಯೆ, 10 ಸಾವಿರ ಅಥವಾ ಅದಕ್ಕಿಂತ ಹೆಚ್ಚಿನ ಹಣವನ್ನು ನಮೂದಿಸಿದ ನಂತರ, ಗ್ರಾಹಕರ ಖಾತೆಯೊಂದಿಗೆ ಜೋಡಿಸಲ್ಪಟ್ಟಿರುವ ಅವರ ಮೊಬೈಲ್ ಸಂಖ್ಯೆಗೆ ನಾಲ್ಕು ಅಂಕಿಗಳ ಒಟಿಪಿ ರವಾನೆಯಾಗಲಿದೆ. ಆ ಸಂಖ್ಯೆಯನ್ನು ಎಟಿಎಂನಲ್ಲಿ ನಮೂದಿಸಿದ ನಂತರವಷ್ಟೇ ಗ್ರಾಹಕರು ಹಣ ಪಡೆಯಲು ಸಾಧ್ಯವಾಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.