ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.10;

ಹೊಸಪೇಟೆ ತಾಲ್ಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಷಕೀಬ್ ಎಸ್ ಕಣದಮನೆ ನವಿಲೇಹಾಳ್ ರವರು ಎಂ ಎಂ ಕಲಬುರ್ಗಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಷಕೀಬ್ ಕೆ ಎಸ್ ಅವರು ಕಳೆದ ಐದಾರು ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ, ಸಂಶೋಧನ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ, ಚಿತ್ರದುರ್ಗ ಜಿಲ್ಲೆಯ ಕರುನಾಡ ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾತಂಡವು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜೂನ್ 30 ರಂದು ಪ್ರಶಸ್ತಿ ಪ್ರದಾನ :

ಮೊಣಕಾಲ್ಮೂರಲ್ಲಿ ನಡೆಯುವ 2ನೇ ರಾಜ್ಯಮಟ್ಟದ ಕರುನಾಡ ಸಾಹಿತ್ಯ ಸಮ್ಮೇಳನದಲ್ಲಿ ಷಕೀಬ್ ಕೆ ಎಸ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರುನಾಡ ಹಣತೆ ಕವಿ ಬಳಗದ ಅಧ್ಯಕ್ಷ ಎಸ್.ರಾಜು ಸೂಲೇನಹಳ್ಳಿ, ಉಪಾಧ್ಯಕ್ಷ ಮೆಹಬೂಬ್ ತಿಳಿಸಿದ್ದಾರೆ. ಷಕೀಬ್ ರವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನವಿಲೇಹಾಳ್ ಗ್ರಾಮದ ಕೆ. ಬಿ ಷಂಷು ಮತ್ತು ಪರ್ವೀನ್ ಹೆಚ್ ದಂಪತಿಯ ಪುತ್ರರಾಗಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.