ಕೆ.ಎನ್.ಪಿ.ವಾರ್ತೆ,ಮಂಡ್ಯ,ಜು.15;

ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು, ನೀರು ಸೇವಿಸಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ಎ.ಹುಲ್ಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೀರಿನ ಟ್ಯಾಂಕಿಗೆ ವಿಷ ಬೆರೆಕೆಯಾಗಿದ್ದು ವಿಷ ಮಿಶ್ರಿತ ನೀರು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಾಗಿರುವ ಮಕ್ಕಳನ್ನು ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಸ್ವಸ್ಥರಾದ ವಿದ್ಯಾರ್ಥಿಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅವರನ್ನು ಮಂಡ್ಯ ಮಿಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತಂತೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.