ಕೆ.ಎನ್.ಪಿ.ವಾರ್ತೆ,ಮುಂಬೈ,ಅ.29;

ಭೂಗತ ಜಗತ್ತಿನೊಂದಿಗೆ ಆರ್ಥಿಕ ಅವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಅವರಿಗೆ ಸೋಮವಾರ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತನಾಗಿರುವ ಇಕ್ಬಾಲ್ ಮಿರ್ಚಿಯ ಜತೆ ಆರ್ಥಿಕ ಅವ್ಯವಹಾರ ನಡೆಸಿದ ಆರೋಪ ಇವರ ಮೇಲಿದೆ. ನವೆಂಬರ್ 4ರಂದು ಮುಂಬೈನಲ್ಲಿನ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಬೇಕೆಂದು ಶಿಲ್ಪಾ ಶೆಟ್ಟಿ-ಕುಂದ್ರಾ ದಂಪತಿಗಳಿಗೆ ಸೂಚಿಸಲಾಗಿದೆ.

ದಾವೂದ್ ಗ್ಯಾಂಗ್ ನ ಇಕ್ಬಾಲ್ ಜತೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯಮಿ ರಾಜ್ ಕುಂದ್ರಾ ಅವರ ಬ್ಯುಸಿನೆಸ್ ಪಾರ್ಟ್ನರ್ ಆಗಿದ್ದ ಅಲ್ಲದೆ ಐಪಿಎಲ್ ಮ್ಯಾಚ್ ಫಿಕ್ಸಿಂಗ್, ಬಿಟ್ ಕಾಯಿನ್ ಅವ್ಯವಹಾರಗಳಲ್ಲಿ ಸಹ ಈ ದಂಪತಿಗಳ ಹೆಸರಿದೆ.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.