ಕೆ.ಎನ್.ಪಿ.ವಾರ್ತೆ,ಶಿವಮೊಗ್ಗ,ಅ.28;

ಸಾಗರ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಶಿಕ್ಷಕನೊಬ್ಬನನ್ನು ಬಂಧಿಸಿರುವ ಪ್ರಕರಣ ವರದಿಯಾಗಿದೆ.

ವಿದ್ಯಾರ್ಥಿನಿಗೆ ಕಳೆದೊಂದು ತಿಂಗಳಿನಿಂದ ಡ್ರಾಯಿಂಗ್ (ಚಿತ್ರಕಲೆ) ಕಲಿಸುವ ಸೋಗಿನಲ್ಲಿ ಚನ್ನಕೇಶವ ಎಂದು ಗುರುತಿಸಲ್ಪಟ್ಟ ಆರೋಪಿ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದನೆಂದು ಆರೋಪಿಸಲಾಗಿದೆ.

ಈ ಸಂಬಂಧ ಬಾಲಕಿ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಆದರೆ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಶಾಲೆ ವಿಫಲವಾದ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಶಿಕ್ಷಕರ ವಿರುದ್ಧ ಶುಕ್ರವಾರ ಸಾಗರ ತಾಲೂಕು ಗ್ರಾಮೀಣ ಪೊಲೀಸರಲ್ಲಿ ದೂರು ಸಲ್ಲಿಸಿದ್ದಾರೆ. ಇದೀಗ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.