ಕೆ.ಎನ್.ಪಿ.ವಾರ್ತೆ,ತುಮಕೂರು,ಜ.31;
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲೈಂಗೈಕ್ಯರಾಗಿರುವ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಕಾರ್ಯಕ್ರಮ ಇಂದು ನೆರವೇರಿತು.
ಶಿವಕುಮಾರ ಸ್ವಾಮೀಜಿ ಲೈಂಗೈಕ್ಯರಾಗಿ ಇಂದಿಗೆ 11 ನೇ ದಿನ, ಇಂದು ಹಮ್ಮಿಕೊಂಡಿದ್ದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ನಾಡಿನ ವಿವಿಧ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು.
ಶ್ರೀಗಳ ಪುಣ್ಯಾರಾಧನೆ ಹಿನ್ನೆಲೆ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ವಿವಿಧ ಮಠಾಧೀಶರು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಿದರು.
ನಂತರ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಗದ್ದುಗೆಯಿಂದ ಗೋಸಲ ಸಿದ್ದೇಶ್ವರ ವೇದಿಕೆವರೆಗೆ ಭಾರೀ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮೆರವಣಿಗೆಯಲ್ಲಿ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು, ಮಠದ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡು ಶ್ರೀಗಳಿಗೆ ಜಯಘೋಷ ಮೊಳಗಿಸಿ ಭಾರತರತ್ನ ನೀಡುವಂತೆ ಒತ್ತಾಯಿಸಿದರು.
ವೀರಗಾಸೆ, ಕಂಸಾಳೆ, ವಿದ್ಯಾರ್ಥಿಗಳ ಬ್ಯಾಂಡ್ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಶ್ರೀಗಳಿಗೆ ಕಲಾನಮನ ಸಲ್ಲಿಸಿದವು. ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀಗಳ ಗದ್ದುಗೆ ದರ್ಶನ ಪಡೆದರು.
ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಭಕ್ತರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸಲಾಗಿತ್ತು.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.