ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.27;

ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉದ್ಯೋಗ ಖಾತ್ರಿ ಯೋಜನೆ ಅಡಿ ಗೌಡರ ಹೊಲದಲ್ಲಿ ಬದು ನಿರ್ಮಾಣ ಕೆಲಸಕ್ಕಾಗಿ ತೆರಳಿದ್ದ ವೇಳೆ ಸಿಡಿಲು ಬಡಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಿರಣ (17), ಅರವಿಂದ(21) ಮೃತ ದುರ್ದೈವಿಗಳು. ಉಮೇಶ (22), ಈರಪ್ಪ ( 25) ಗಂಭೀರವಾಗಿ ಗಾಯಗೊಂಡವರು. ಗಾಯಗೊಂಡವರನ್ನು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗಿನ ಜಾವ ಬದು ನಿರ್ಮಾಣ ಕೆಲಸಕ್ಕಾಗಿ 60ಕ್ಕೂ ಹೆಚ್ಚು ಮಂದಿ ಕೂಲಿಕಾರರು ತೆರಳಿದ್ದರು. ಗುಡುಗು, ಮಿಂಚು ಸಮೇತ ಮಳೆ ಸುರಿಯಲಾರಂಭಿಸಿದಾಗ ಕೂಲಿಕಾರರು ರಸ್ತೆ ಬಳಿ ತೆರಳಿದ್ದರು. ಆದರೆ ಕಿರಣ, ಅರವಿಂದ ಮಾತ್ರ ಮರದ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಅಪ್ಪಳಿಸಿದೆ ಎಂದು ತಿಳಿದುಬಂದಿದೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.