ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.31;

ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ವಿಧಾನಸಭಾ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆ ವರೆಗೆ ಕಾಲಾವಕಾಶವಿತ್ತು. ಅದರಂತೆ ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯಾಗಿ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ವತಿಯಿಂದ ಯಾರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿರಲಿಲ್ಲ. ಹೀಗಾಗಿ ಇಂದು ಕಾಗೇರಿ ಅವರು ಅವಿರೋಧವಾಗಿ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

1990ರಲ್ಲಿ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದ ಕಾಗೇರಿ, 1994ರವರೆಗೆ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಅಂಕೋಲಾ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಸತತ ಮೂರು ಬಾರಿ ಅಂಕೋಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2008, 2013 ಮತ್ತು 2018ರ ವಿಧಾನಸಭೆ ಚುನಾವಣೆಗಳಲ್ಲಿ ಶಿರಸಿ ಮತ್ತು ಸಿದ್ದಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2006ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದರು. 2008ರಲ್ಲಿ ಬಿಜೆಪಿ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

http://karnatakanewsportal.com/bjpya-speaker-abhyarthi-dideerbadalu-bopayya-badalu-kageri-namapatra-sallike/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.