ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.13;

ರಾಜ್ಯ ರಾಜಕೀಯದ ಪ್ರಹಸನ ಮುಂದುವರಿದಿದ್ದು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ 10 ಮಂದಿ ಶಾಸಕರ ಜೊತೆಗೆ ತಮ್ಮನ್ನೂ ಕೂಡ ಪರಿಗಣಿಸುವಂತೆ ಮತ್ತೆ ಐವರು ಅತೃಪ್ತ ಶಾಸಕರು ಅರ್ಜಿ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಸಿರುವ 16 ಶಾಸಕರ ಪೈಕಿ ಹತ್ತು ಮಂದಿ ಶಾಸಕರು ಈ ಮೊದಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈಗ ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್, ಹೊಸಕೋಟೆ ಎಂಟಿಬಿ ನಾಗರಾಜ್, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ, ಹೊಸಪೇಟೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕೂಡ ರಾಜೀನಾಮೆ ವಿಳಂಬದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಐವರು ಶಾಸಕರು ಪ್ರತ್ಯೇಕವಾಗಿ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ. ಜತೆಗೆ ಈ ಮೊದಲೇ ಅರ್ಜಿ ಸಲ್ಲಿಸಿದ್ದ ಹತ್ತು ಶಾಸಕರ ಅರ್ಜಿಗಳೊಂದಿಗೆ ತಮ್ಮ ಅರ್ಜಿಯನ್ನೂ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.

ರಾಜೀನಾಮೆ ಸಲ್ಲಿಸಿ ಇಷ್ಟು ದಿನ ಆದರೂ ಅಂಗೀಕಾರ ಮಾಡಿಲ್ಲ. ಇಷ್ಟು ದಿನ ಏಕೆ ವಿಳಂಬ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ನಾವು ಸರ್ಕಾರದ ತಾರತಮ್ಯ ಧೋರಣೆಯ ವಿರುದ್ಧ ಬೇಸರದಿಂದ ರಾಜೀನಾಮೆ ನೀಡಿದ್ದೇವೆಯೇ ಹೊರತು ವೈಯಕ್ತಿಕ ಕಾರಣಕ್ಕೆ ಅಲ್ಲ. ನಮ್ಮ ರಾಜೀನಾಮೆಗೆ ಸರ್ಕಾರದ ದುರಾಡಳಿತವೇ ಕಾರಣ. ಇದನ್ನು ಅರ್ಥ ಮಾಡಿಕೊಳ್ಳದೆ ಸ್ಪೀಕರ್ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ನೇರ ಆರೋಪ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.