ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.09;

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಪ್ರಕ್ರಿಯೆ ನ.11ಕ್ಕೆ ಆರಂಭಗೊಳ್ಳಲಿದ್ದು, ಈ ಮಧ್ಯೆ ಉಪ ಚುನಾವಣೆ ಮುಂದೂಡುವಂತೆ ಅನರ್ಹ ಶಾಸಕರು ಮಾಡಿರುವ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿಯವರು ತೀರ್ಪು ವಿಳಂಬವಾಗುತ್ತಿರುವ ಹಿನ್ನೆಲೆ ಹಾಗೂ ಶನಿವಾರದಿಂದ ನ.12ವರೆಗೆ ಕೋರ್ಟಿಗೆ ರಜೆ ಇರುವ ಕಾರಣ ಉಪ ಚುನಾವಣೆ ಮುಂದೂಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದರು.

ಈ ಮನವಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಮಣ್ ನೇತೃತ್ವದ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ಉಪ ಚುನಾವಣೆಯನ್ನು ಮುಂದೂಡಲು ನಿರ್ದೇಶನ ನೀಡುವುದಿಲ್ಲ ಎಂದು ತಿಳಿಸಿದೆ.

ನವೆಂಬರ್ 11 ರಿಂದ ಉಪ ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿ ಉಪಚುನಾವಣೆಯನ್ನು ಮುಂದೂಡಬೇಕು. ಇದಕ್ಕಾಗಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬೇಕೆಂದು ರೋಹ್ಟಗಿ ಮನವಿ ಮಾಡಿಕೊಂಡರು. ಆದರೆ, ಉಪಚುನಾವಣೆ ಮುಂದೂಡಿಕೆ ಕುರಿತ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಪಟ್ಟಿ ಮಾಡಲು ಒಪ್ಪಿದ ನ್ಯಾಯಮೂರ್ತಿಗಳು, ಆಯೋಗಕ್ಕೆ ಚುನಾವಣೆ ಮುಂದೂಡುವಂತೆ ನಿರ್ದೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಉಪ ಚುನಾವಣೆಯನ್ನು ಮುಂದೂಡಲು ನಿರ್ದೇಶನ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ ಬೆನ್ನಲ್ಲೇ ಅನರ್ಹ ಶಾಸಕರಲ್ಲಿ ಆತಂಕ ಮನೆ ಮಾಡಿದ್ದು, ತ್ರಿಶಂಕು ಸ್ಥಿತಿಗೆ ತಲುಪಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.