ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.26;

ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದ್ದು ನಾಳೆ ಸಂಜೆ 5 ಗಂಟೆಯೊಳಗೆ ಸದನದಲ್ಲಿ ಬಹುಮತ ಸಾಬೀತುಪಡಿಸಿ ಎಂದು ಆದೇಶ ನೀಡಿದೆ.

ಅಲ್ಲದೆ ಹಂಗಾಮಿ ಸ್ಪೀಕರ್ ಅವರನ್ನು ನೇಮಕ ಮಾಡಬೇಕೆಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಆದೇಶ ನೀಡಿರುವ ನ್ಯಾಯಾಲಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ನಾಳೆ ಸಂಜೆಯೊಳಗೆ ಪ್ರಮಾಣವಚನ ಸ್ವೀಕರಿಸಬೇಕೆಂದು ಹೇಳಿದೆ.

ಬಹುಮತ ಸಾಬೀತು ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ನಡೆಯಬೇಕು, ಬಹುಮತ ಸಾಬೀತು ವೇಳೆ ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ.

ಸಂಪೂರ್ಣ ವಿಶ್ವಾಸಮತ ಪರೀಕ್ಷೆ ಪ್ರಕ್ರಿಯೆಯನ್ನು ನೇರ ಪ್ರಸಾರ ಮಾಡಬೇಕು ಎಂದು ಸುಪ್ರೀಂಕೋರ್ಟ್‌ ತಾಕೀತು ಮಾಡಿದೆ.

ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾ.ಸಂಜೀವ್‌ ಖನ್ನಾ ಮತ್ತು ನ್ಯಾ.ಅಶೋಕ್‌ ಭೂಷಣ್‌ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ಎನ್‌ಸಿಪಿ-ಕಾಂಗ್ರೆಸ್‌-ಶಿವಸೇನೆ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ತೀರ್ಪು ಪ್ರಕಟಿಸಿದೆ.

ದೇವೇಂದ್ರ ಫಡ್ನವಿಸ್‌ ಹಾಗೂ ಅಜಿತ್‌ ಪವಾರ್‌ಗೆ ಸರಕಾರ ರಚಿಸಲು ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆ ಪ್ರಶ್ನಿಸಿ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

ರಾಜ್ಯಪಾಲರ ನಿರ್ಧಾರದ ನ್ಯಾಯಾಂಗ ಪರಿಶೀಲನೆಯನ್ನು ಇನ್ನಷ್ಟು ವಿಚಾರಣೆ ನಡೆಸಿ ಎಲ್ಲಾ ಪಕ್ಷಗಳು ತಮ್ಮ ಪ್ರತಿಕ್ರಿಯೆಯನ್ನು ಮತ್ತು ಈ ವಿಷಯದ ಕುರಿತು ಇನ್ನಷ್ಟು ವಿಚಾರಣೆಯನ್ನು ಇನ್ನು 8 ವಾರಗಳೊಳಗೆ ನೀಡಲು ನ್ಯಾಯಾಲಯ ನಿರ್ಧರಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.