ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ,13;

ಡಿಸೆಂಬರ್ ೫ ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸುವ ಭವಿಷ್ಯ ಕುರಿತು ಬುಧವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡುವ ನಿರೀಕ್ಷೆಯಿದ್ದು, ಅನರ್ಹರಲ್ಲಿ ಆತಂಕ ಹೆಚ್ಚಾಗಿದೆ.

ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ನೀಡಲಿದೆಯೋ? ಇಲ್ಲವೇ ಸ್ಪೀಕರ್ ಆದೇಶವನ್ನು ಎತ್ತಿ ಹಿಡಿಯಲಿದೆಯೋ ? ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಲಿದೆಯೋ? ಇಲ್ಲವೋ ಎಂಬ ಆತಂಕದಲ್ಲಿದ್ದಾರೆ.

ಹುಣಸೂರು,ಕೆ.ಆರ್.ಪೇಟೆ,ಮಹಾಲಕ್ಷ್ಮೀ ಲೇಔಟ್, ಯಶವಂತಪುರ, ಕೆ.ಆರ್.ಪುರಂ, ಗೋಕಾಕ್, ಕಾಗವಾಡ ಸೇರಿದಂತೆ 15 ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ ಮುಂದೂಡುವಂತೆ ಕಳೆದ ವಾರ ಅನರ್ಹ ಶಾಸಕರ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು.

ಆದರೆ ಉಪಚುನಾವಣೆಯನ್ನು ಮುಂದೂಡಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದ್ದಲ್ಲದೆ ನಿಮಗಾಗಿ ಆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು.

ಆದರೆ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತೀರ್ಪು ನೀಡಲಿದ್ದು, ಅಂದೇ ಅರ್ಜಿ ಸಲ್ಲಿಸಿ, ವಿಚಾರಣೆ ನಡೆಸೋಣ ಎಂದು ಕೋರ್ಟ್ ಸೂಚನೆ ನೀಡಿತ್ತು.

ಇಂದು ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟವಾಗಲಿದ್ದು, ಅದೇ ಕಾಲಕ್ಕೆ ಚುನಾವಣೆ ಮುಂದೂಡುವಂತೆ ಶಾಸಕರು ಮಾಡಿಕೊಳ್ಳಲಿರುವ ಮನವಿಗೆ ಸಂಬಂಧಿಸಿದ ವಿಚಾರಣೆಯೂ ನಡೆಯಲಿದೆ.

ಹಿಂದಿನ ವಿಧಾನಸಭೆಯ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ 14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರನ್ನು ಜುಲೈ ತಿಂಗಳಿನಲ್ಲಿ ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಅನರ್ಹಗೊಂಡಿರುವ ಶಾಸಕರು ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಪ್ರಕಟವಾಗುತ್ತಿದೆ.

ನ್ಯಾಯಮೂರ್ತಿ ಎನ್‌. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಅನರ್ಹ ಶಾಸಕರು, ಕಾಂಗ್ರೆಸ್, ಜೆಡಿಎಸ್, ಸ್ಪೀಕರ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದೆ.

ಇಂದು ಬೆಳಗ್ಗೆ 10.30ಕ್ಕೆ ಪ್ರಕರಣದ ತೀರ್ಪನ್ನು ನೀಡಲಿದೆ. ಸ್ಪೀಕರ್ ಆದೇಶದ ಪ್ರಕಾರ 17 ಅನರ್ಹ ಶಾಸಕರು ಹದಿನೈದನೇ ವಿಧಾನಸಭೆ ಅವಧಿ ಮುಗಿಯುವ 2023ರ ತನಕ ಚುನಾವಣೆಗೆ ಸ್ಫರ್ಧೆ ಮಾಡುವಂತಿಲ್ಲ. ಆದರೆ, ಈಗಾಗಲೇ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಇಂದಿನ ತೀರ್ಪು ಕುತೂಹಲಕ್ಕೆ ಕಾರಣವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.