ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.09;

ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳು ಶೇ.50ರ ರಿಯಾಯಿತಿ ದರದಲ್ಲಿ ದೊರೆಯಲಿವೆ ಎಂದು ಪ್ರಾಧಿಕಾರದ ಆಢಳಿತಾಧಿಕಾರಿಗಳು ತಿಳಿಸಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.

ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು. ಈ ನಿಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಮಾತ್ರ, ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲ ಪ್ರಕಾರದ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಜಿಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಮತ್ತು ಪ್ರಾಧಿಕಾರದ ಆನ್‍ಲೈನ್ ನಲ್ಲಿ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.

ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದ ಮೂಲಕವೂ ರಿಯಾಯಿತಿಯಲ್ಲಿ ಪಡೆಯಬಹುದಾಗಿದ್ದು, ವೆಬ್‍ಸೈಟ್ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-22484516/ 22107704/05 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.