ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ19;

ಪೊಲೀಸ್ ಠಾಣೆಯ ಮುಂದೆಯೇ ನನ್ನ ತಾಳಿ ಸರವನ್ನು ಕಿತ್ತುಕೊಂಡರು. ನನ್ನ ಪತಿಯನ್ನು ತೀವ್ರವಾಗಿ ಥಳಿಸಿದರು. ಮನೆ ಮಾಲೀಕ ಮತ್ತು ಪೊಲೀಸರ ಕಿರುಕುಳದಿಂದ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಮಹಿಳೆಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ಮನೆ ಬಾಡಿಗೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನಲೆಯಲ್ಲಿ ಮಾಲೀಕರು ಮಂಜುಳಾ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಇನ್ನು ಪೊಲೀಸ್ ಠಾಣೆ ಮುಂದೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಪೊಲೀಸರ ಮುಂದೆಯೇ ಮಂಜುಳಾ ಮತ್ತು ಪತಿ ಸುಬ್ರಮಣಿಗೆ ಥಳಿಸಿದ್ದರು. ಇದರಿಂದ ಮನನೊಂದು ಮಂಜುಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.