ಕೆ.ಎನ್.ಪಿ.ವಾರ್ತೆ,ಕುಂದಾಪುರ,ಜು.11;

ತಾಯಿಯ ಪಕ್ಕದಲ್ಲಿ ಮಲಗಿದ್ದ ಎರಡು ವರ್ಷದ ಹೆಣ್ಣು ಮಗುವೊಂದನ್ನು ದುಷ್ಕರ್ಮಿಗಳಿಬ್ಬರು ಗುರುವಾರ ಬೆಳ್ಳಂಬೆಳಗ್ಗೆ ಅಪಹರಿಸಿರುವ ಘಟನೆ ಕುಂದಾಪುರ ತಾಲೂಕಿನ ಎಡಮೊಗೆ ಗ್ರಾಮದಲ್ಲಿ ನಡೆದಿದೆ.

ಎಡಮೊಗೆ ಗ್ರಾಮದ ಕುಮ್ಟಿ ಬೇರು ಸಂತೋಷ್ ನಾಯ್ಕ ಎಂಬುವವರ ಎರಡು ವರ್ಷದ ಹೆಣ್ಣು ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ.

ಸಂತೋಷ್ ನಾಯ್ಕ, ಪತ್ನಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ನಿದ್ರಿಸುತ್ತಿದ್ದಾಗ. ನಸುಕಿನ ಜಾವ 4 ಗಂಟೆಗೆ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಗುವನ್ನು ಅಪಹರಿಸಿಕೊಂಡು ಹೋಗುತ್ತಿದ್ದಾಗ, ತಾಯಿ ಎಚ್ಚರಗೊಂಡು, ದುಷ್ಕರ್ಮಿಗಳನ್ನು ಹಿಂಬಾಲಿಸುತ್ತಾ ಬೊಬ್ಬೆ ಹಾಕಿದ್ದಾರೆ. ಆಗ ಅಪಹರಣಕಾರರು ಮಗುವಿನ ಸಮೇತ ತುಂಬಿ ಹರಿಯುತ್ತಿದ್ದ ಕುಬ್ಜಾ ನದಿಗೆ ಹಾರಿದ್ದಾರೆ. ಬಳಿಕ ಈಜುತ್ತಾ ನದಿ ದಾಟಿ ಹೊಸಂಗಡಿಯತ್ತ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಗೆ ಕಾರಣವಿನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಶಂಕರನಾರಾಯಣ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಈ ಮಗುವಿನ ಬಗ್ಗೇ ಮಾಹಿತಿ ಸಿಕ್ಕಿದರೆ ಮಾಹಿತಿ ನೀಡಿ…

ಉಡುಪಿ ಪೊಲೀಸ್ ಕಂಟ್ರೋಲ್ 0820 2526444, 0820 2526709

ಶಂಕರನಾರಾಯಣ ಠಾಣೆ 08259 280299 & 9480805456

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.