ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.29;

ಟಿಕ್ ಟಾಕ್ ನಲ್ಲಿ ಜನಪ್ರಿಯವಾಗಿದ್ದ ಬಾಲ ಪ್ರತಿಭೆ ಅರುಣಿ ಕುರುಪ್ ದುರ್ಮರಣ ಹೊಂದಿದ್ದಾರೆ.

ಕೇರಳದ ಅರುಣಿ ಕುರುಪ್ ಮಲಯಾಳಂ ಭಾಷೆಯಲ್ಲಿ ಟಿಕ್ ಟಾಕ್ ವಿಡಿಯೋ ಮಾಡುವ ಮೂಲಕ ಜನಪ್ರಿಯಳಾಗಿದ್ದಳು. ಆದರೆ ಆಕೆಯನ್ನು ಕಾಡುತ್ತಿದ್ದ ಮೆದುಳಿನ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಅರುಣಿಗೆ ತೀವ್ರವಾಗಿ ತಲೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯನ್ನು ಕೂಡಲೇ ತಿರುವನಂತಪುರಂನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಅರುಣಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಳು. ಟಿಕ್ ಟಾಕ್ ನಲ್ಲಿ 14 ಸಾವಿರ ಹಿಂಬಾಲಕರನ್ನು ಹೊಂದಿದ್ದಳು. ಅರುಣಿ ಸಾವಿಗೆ ಹಿಂಬಾಲಕರು ಸಂತಾಪ ಸೂಚಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.