ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.30;

ಈ ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಪ್ರಾರಂಭವಾಗಿದ್ದ ವಿವಾದಿತ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಆದರೆ, ಟಿಪ್ಪು ಜಯಂತಿ ಆಚರಣೆ ವಿರುದ್ಧ ರಾಜ್ಯದಲ್ಲಿ ಅದರಲ್ಲೂ ಪ್ರಮುಖವಾಗಿ ಕೊಡಗು ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆದಿದ್ದು, ಜಿಲ್ಲೆಯ ಜನರು ಕಾರ್ಯಕ್ರಮದ ವಿರುದ್ಧವಾಗಿದ್ದಾರೆ.

ಈ ಕಾರ್ಯಕ್ರಮ ಆಯೋಜಿಸಿದ್ದರಿಂದ ಜಿಲ್ಲೆಯಲ್ಲಿ ಸಾವು ನೋವು ಸಂಭವಿಸುತ್ತಿದ್ದು, ಸಾರ್ವಜನಿಕರ ಮತ್ತು ಸರಕಾರಿ ಆಸ್ತಿ-ಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ. ಅಷ್ಟೆ ಅಲ್ಲದೆ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಇದ್ದು, ಜನರ ನಡುವೆ ಸಾಮರಸ್ಯ ಹದಗೆಟ್ಟಿದೆ. ಹೀಗಾಗಿ ಕೂಡಲೇ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಬೇಕೆಂದು ಕೋರಿ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಕೆ.ಜೆ.ಬೋಪಯ್ಯ ಅವರು ಮಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.

ಈಗ ಕೆ.ಜೆ.ಬೋಪಯ್ಯ ಮನವಿಗೆ ಸ್ಪಂದಿಸಿರುವ ರಾಜ್ಯ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.