ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜ.05;

ಲಯನ್ಸ್ ಕ್ಲಬ್ ಗಂಗಾವತಿ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದಂತ ವೈದ್ಯಕೀಯ ಕಾಲೇಜು ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘ ಗಂಗಾವತಿ ಇವರ ಸಹಯೋಗದಲ್ಲಿ ಉಚಿತ ದಂತ ಪಂಕ್ತಿ ಜೋಡನಾ ಶಿಬಿರವನ್ನು ನಾಳೆ ಹಮ್ಮಿಕೊಳ್ಳಲಾಗಿದೆ.

ತಾಲೂಕಿನ ಲಯನ್ಸ್ ಕ್ಲಬ್ ಆವರಣ, ಐ.ಎಂ.ಎ.ಹಾಲ್ ನಲ್ಲಿ ನಾಳೆ ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಉಚಿತ ದಂತ ಪಂಕ್ತಿ ಜೋಡನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಗಂಗಾವತಿ ಸರಕಾರಿ ಆಸ್ಪತ್ರೆ ಆಢಳಿತಾಧಿಕಾರಿಗಳಾದ ಡಾ.ಈಶ್ವರ ಸವಡಿ ಶಿಬಿರವನ್ನು ಉದ್ಘಾಟಿಸುವರು, ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ಅನಂತರಾಜ ಗೋಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ವಿಶ್ವನಾಥ ರೆಡ್ಡಿ, ಪಿಡಿಜಿಯ ಡಾ.ಯು.ಮಾದವಶೆಟ್ಟಿ, ಡಾ.ಮಲ್ಲಿಕಾರ್ಜುನ, ಎಂ.ನಾಗರಾಜ, ಡಾ.ಶೃತಿ ಸಿ.ಮಾಲ್ವೆ, ಡಾ.ಶ್ರೀನಿವಾಸುಲು ಕೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.