ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಡಿ.02;

ಪ್ರೇರಣೆ ಸಮಾಜ ಸೇವಾ ಸಂಸ್ಥೆ ಚರ್ಚ್, ಬಾಪೂಜಿ ದಂತ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಅಮರ ಭಾರತಿ ವಿದ್ಯಾ ಕೇಂದ್ರ ಇವರ ಸಹಯೋಗದೊಂದಿಗೆ ಉಚಿತ ದಂತ ತಪಾಸಣೆ ಶಿಬಿರವನ್ನು ಜಗಳೂರು ಪಟ್ಟಣದ ನಲಂದ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಲಂದ ಪದವಿ ಕಾಲೇಜು ಪ್ರಾಂಶುಪಾಲರಾದ ಜೋತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಹದ ಮುಖ್ಯವಾದ ಅಂಗ ಬಾಯಿ, ಬಾಯಿಯಲ್ಲಿರುವ ಹಲ್ಲುಗಳನ್ನು ಸ್ವಚ್ಛದಾಗಿ, ಸುರಕ್ಷಿತವಾಗಿ ಕಾಪಾಡಿಕೊಳ್ಳಬೇಕು.‌

ಹಿರಿಯರಿಂದ ಮಕ್ಕಳವರೆಗೆ ಅನೇಕರು ದಂತ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂತಹ ಶಿಬಿರಗಳಿಂದ ಜನಗಳಿಗೆ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಪ್ರೇರಣೆ ಸಮಾಜ ಸೇವಾ ಸಂಸ್ಥೆ ನಿರ್ದೇಶಕ ಫಾದರ್ ವಿಲಿಯಂ ಮೀರಂದ, ಲಯನ್ಸ ಕ್ಲಬ್ ಅಧ್ಯಕ್ಷೆ ಶಾಹಿನ ಬೇಗಂ, ಬಾಪೂಜಿ ದಂತ ಕಾಲೇಜು ಮತ್ತು ಆಸ್ಪತ್ರೆ ಹಿರಿಯ ವೈದ್ಯೆ ಡಾ. ಸಪ್ನ ಬಿ, ಡಾ.ಮಂಜೂಷ, ನಲಂದ ಪದವಿ ಕಾಲೇಜು ಎನ್.ಎಸ್.ಎಸ್. ಕಾರ್ಯಕ್ರಮ ಆಯೋಜಕರು ನಿಂಗಪ್ಪ, ಉಪನ್ಯಾಸಕರಾದ ಜಿ.ಬಿ. ಶಿವಕುಮಾರ್, ಅಮಾನ ಉಲ್ಲಾಖಾನ್, ಶಂಶುದ್ಧಿನ್, ಸಿ.ತಿಪ್ಪೇಸ್ವಾಮಿ, ನಾಗೇಶ್ ಸ್ವಾಮಿ ಸೇರಿದಂತೆ ವೈದ್ಯರು ಮತ್ತು ಕಾಲೇಜು ಉಪನ್ಯಾಸಕರು ಹಾಜರಿದ್ದರು.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.