ಕೆ.ಎನ್.ಪಿ.ವಾರ್ತೆ,ಮುಂಬೈ,ನ.27;

ಶಿವಸೇನಾ ಮುಖ್ಯಸ್ಥ ಹಾಗೂ ‘ಮಹಾ ವಿಕಾಸ ಅಘಾದಿ’ ಮೈತ್ರಿಕೂಟದ ನಾಯಕ ಉದ್ಧವ್ ಠಾಕ್ರೆ ಅವರು ಮಂಗಳವಾರ ರಾತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ಗುರುವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಗುರುವಾರ ಶಿವಾಜಿ ಪಾರ್ಕ್ ನಲ್ಲಿ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

‘ಮಹಾ ವಿಕಾಸ ಅಘಾದಿ’ ನಾಯಕರು ನಿನ್ನೆ ರಾತ್ರಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿ, ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಾಳಾಸಾಹೇಬ್ ಥೋರಾಟ್ ಅವರು, ಉದ್ಧವ್ ಠಾಕ್ರೆ ಅವರು ನವೆಂಬರ್ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಪುಟ ಮತ್ತು ಖಾತೆ ಹಂಚಿಕೆ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.

ಇದಕ್ಕು ಮುನ್ನ ಖಾಸಗಿ ಹೋಟೆಲ್ ನಲ್ಲಿ ನಡೆದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ ಉದ್ಧವ್‌ ಠಾಕ್ರೆ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಬಳಿಕ ಮಾತನಾಡಿದ ಉದ್ಧವ್ ಠಾಕ್ರೆ, ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಯಾವತ್ತೂ ಕನಸು ಕಂಡಿರಲಿಲ್ಲ. ಇದಕ್ಕಾಗಿ ನಾನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಇತರರಿಗೆ ಧನ್ಯವಾದ ಹೇಳುತ್ತೇನೆ ಎಂದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.