ಕೆ.ಎನ್.ಪಿ.ವಾರ್ತೆ,ಉಡುಪಿ,ಜ.04;

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಉಡುಪಿಯ ಜಿಲ್ಲಾ ಜೆಡಿಎಸ್ ವಕ್ತಾರ ಕಳೆದ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ.

ಜಿಲ್ಲಾ ಜಾತ್ಯತಿತ ಜನತಾ ದಳದ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಮಾಡಿಕೊಂಡವರು.

ಪ್ರದೀಪ್ ಜಿ ಬೈಲೂರ್ ಹಲವು ವರ್ಷಗಳಿಂದ ಜಿಲ್ಲಾ ಜೆಡಿಯು ವಕ್ತಾರರಾಗಿ ಕೆಲಸ ಮಾಡುತ್ತಿದ್ದರು. ಪ್ರದೀಪ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರು ಎಂದೂ ಹೇಳಲಾಗಿದ್ದು, ಇದರಿಂದಾಗಿ ಅವರು ಈ ದುಡಿಕಿನ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ ರಾತ್ರಿ ಅವರ ತಂದೆ ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದ ಸಂದರ್ಭ ಕೊರಂಗ್ರಪಾಡಿಯ ಗೇಟ್ ಜಂಕ್ಷನ್ ಬಳಿಯ ತನ್ನ ಬಾಡಿಗೆ ಮನೆಯಲ್ಲಿ ಇದ್ದ ಪ್ರದೀಪ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.