ಕೆ.ಎನ್.ಪಿ.ವಾರ್ತೆ,ಹಾವೇರಿ,ನ.21;

ಹದಿನೈದು ಕ್ಷೇತ್ರಗಳ ಉಪ ಚುನಾವಣಾ ಕಣಕ್ಕೆ ಅಖಾಡ ಸಜ್ಜಾಗಿದ್ದು, ಡಿಸೆಂಬರ್ 5 ರಂದು ಉಪಕಣದ ಕದನಕ್ಕೆ ವೇದಿಕೆ ಸಿದ್ದವಾಗಿದೆ.

ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿಯಾದ ಶ್ರೀ ಮಲ್ಲಿಕಾರ್ಜುನ ಹಲಿಗೇರಿ ಇಂದು ಕಾಕೋಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದರು.

ಉಪಚುನಾವಣೆ : ಜೆಡಿಎಸ್ ಬಿರುಸಿನ ಪ್ರಚಾರ

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಪ್ರಜ್ಞಾವಂತ ಮತದಾರರು. ಈ ಬಾರಿ ತಲೆಮೇಲೆ ಬತ್ತದ ಹೊರೆ ಹೊತ್ತ ಮಹಿಳೆ ಚಿನ್ನಿ ಗೆ ಮತ ನೀಡಿ ಪ್ರಚಂಡ ಬಹುಮತದಿಂದ ಆರಿಸಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಮನವಿ ಮಾಡಿದರು.

ಈ ವೇಳೆ ಶಿವಕುಮಾರ್ ಮಠದ, ಕೆ.ಎಸ್ ಸಿದ್ದಬಸಪ್ಪ ಯಾದವ್, ಮಹಾಂತೇಶ್, ಪಿ.ಕೆ ರಾಜನಹಳ್ಳಿ, ಶಂಕ್ರಪ್ಪ ಹಾದಿಮನಿ, ಗ್ರಾಮ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.