ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.07;
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2018-19ನೇ ಸಾಲಿನಲ್ಲಿ ಉಪ್ಪಾರ ಹಾಗೂ ಅಂಬಿಗ ಅದರ ಉಪಜಾತಿಯವರು ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಗ್ರಾಮೀಣ ಪ್ರದೇಶದವರ ವಾರ್ಷಿಕ ಕುಟುಂಬ ವರಮಾನ ರೂ. 40,000/- ಹಾಗೂ ನಗರ ಪ್ರದೇಶದವರ ವಾರ್ಷಿಕ ವರಮಾನ ರೂ. 55,000/- ಒಳಗಿರಬೇಕು.
ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಮಿನಿ ವಿಧಾನಸೌಧ, ಧಾರವಾಡ ಕಚೇರಿಯಲ್ಲಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿತರಿಸಲಾಗುವದು.
ಅರ್ಜಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅಗಸ್ಟ್ 18ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.karnataka.gov.in/dbcdc ಅಥವಾ ದೂ: 0836-2446382 ಸಂಪರ್ಕಿಸಬಹುದು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.