ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.04;

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೃಷ್ಣ ನದಿ ತೀರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯ ನಡೆಯುತ್ತಿದೆ.

ಕೃಷ್ಣಾ ನದಿ ತೀರದಲ್ಲಿ ಅವ್ಯಾಹತ ಮಳೆಯಿಂದಾಗಿ ಸುತ್ತಮುತ್ತಲ ಭಾಗಗಳಲ್ಲಿ ಪ್ರವಾಹ ಉಂಟಾಗಿ ಮುಳುಗಡೆ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಯ್ನಾ ಡ್ಯಾಂನಿಂದ ನೀರು ಬಿಡಲಾಗಿದೆ. ಇದರಿಂದಾಗಿ ಕೃಷ್ಣಾ ನದಿ ತೀರದ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ.

ಕೃಷ್ಣಾ, ದೂದ್ ಗಂಗಾ ಮತ್ತು ವೇದಗಂಗಾ ನದಿಗಳಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ನೀರು ತುಂಬಿ ಚಿಕ್ಕೋಡಿ, ಅಥಣಿ ಮತ್ತು ರಾಯ್ ಭಾಗ ತಾಲ್ಲೂಕುಗಳಲ್ಲಿ ಮುಳುಗಡೆ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರದ ಜಲಾಶಯದಿಂದ ಒಟ್ಟು 2 ಲಕ್ಷದ 05 ಸಾವಿರದ 118 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದ್ದು 16 ಸೇತುವೆಗಳಲ್ಲಿ ಪ್ರವಾಹ ಉಂಟಾಗಿದೆ.

ನಿನ್ನೆ ಶನಿವಾರ ಒಂದೇ ದಿನದಲ್ಲಿ ಮೂರು ಭಾರಿ ನೀರು ಬಿಡುಗಡೆ ಮಾಡಲಾಗಿದ್ದು, ಕ್ಷಣ ಕ್ಷಣಕ್ಕೂ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ರಾಜ್ಯಕ್ಕೆ ಕೃಷ್ಣಾ ನದಿಯ ಮೂಲಕ ಭಾರೀ ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ ಉತ್ತರ ಕರ್ನಾಟಕ ಜಿಲ್ಲೆಯ ಜನರು ಆತಂಕಕ್ಕೊಳಗಾಗಿದ್ದಾರೆ.

ಕೃಷ್ಣಾ ನದಿ ತೀರದ ಬೆಳಗಾವಿ, ಬಾಗಲಕೋಟ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಯ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕೃಷ್ಣಾ ನದಿಯ ಸುತ್ತಮುತ್ತ ಪ್ರವಾಹ ಉಂಟಾಗುವ ಸಾಧ್ಯಾತೆಯಿದ್ದು, ತುರ್ತು ಸ್ಥಿತಿಯಲ್ಲಿ ರಕ್ಷಿಸಲು ಎನ್ ಡಿಆರ್ ಎಫ್ 30 ಜನರು ಹಾಗೂ 2 ಬೋಟುಗಳ ವ್ಯವಸ್ಥೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾನದಿಗೆ ಆಲಮಟ್ಟಿ, ಬಸವಸಾಗರ ಡ್ಯಾಂನಿಂದ 2 ಲಕ್ಷ 70 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಯಾದಗಿರಿಯ ಕೌಳೂರು ಸೇತುವೆ ಮುಳುಗಡೆಯಾಗಿದೆ. ಶಹಾಪುರ- ದೇವದುರ್ಗ ರಸ್ತೆ ಸಂಚಾರ ಬಂದ್ ಆಗಿದೆ. ನದಿ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ಜಿಲ್ಲಾಡಳಿತದಿಂದ 24 ಗಂಟೆಗಳ ಅಲರ್ಟ್ ಘೋಷಣೆ ಮಾಡಲಾಗಿದೆ.

ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಮನವಿ

ಚಿಕ್ಕೋಡಿ ಪ್ರವಾಹ ಕುರಿತು ಸಭೆ ನಡೆಸಿರುವ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ, ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ಹರಿದು ಬರಲಿದೆ. ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿ 41 ಗ್ರಾಮಗಳು ಪ್ರವಾಹ ಪೀಡಿತವಾಗುತ್ತವೆ. ಈಗಾಗಲೇ 10 ಜನ ವಸತಿ ಪ್ರದೇಶಗಳನ್ನು ಸ್ಥಳಾಂತರಿಸಲಾಗಿದೆ. ಇಂದು ಮಧ್ಯಾಹ್ನದವರೆಗೆ 2 ಎನ್‌ಡಿಆರ್‌ಎಫ್ ತಂಡ ಚಿಕ್ಕೋಡಿಗೆ ಆಗಮಿಸಲಿದೆ. 60 ಸಿಬ್ಬಂದಿಗಳ ಎನ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಲಿದ್ದು 25 ಬೋಟ್ ಗಳನ್ನು ಬಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭಾರತೀಯ ಸೇನೆ, ರಾಜ್ಯ, ಕೇಂದ್ರ ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಲ್ಲರು ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಬೆಳಗಾವಿ ಜಿಲ್ಲಾಡಳಿತ ರೈತರಿಗೆ ಹೊರಹೋಗಿ ಕೆಲಸ ಮಾಡದಂತೆ ಎಚ್ಚರಿಕೆ ನೀಡಿದೆ. ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುವಂತೆ ಸೂಚನೆ ನೀಡಲಾಗಿದೆ. ಜನರಿಗೆ ತುರ್ತು ಪರಿಸ್ಥಿತಿಗೆ ಸಹಾಯವಾಣಿ ತೆರೆಯಲಾಗಿದ್ದು ಅದರ ಸಂಖ್ಯೆಗಳು ಈ ರೀತಿ ಇದೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ-0831-2407290, ಎಸ್ ಪಿ ಕಚೇರಿ-0831-2405231, ಚಿಕ್ಕೋಡಿ ತಹಸಿಲ್ದಾರ್ ಕಚೇರಿ-08338-272228, ರಾಯ್ ಭಾಗ್ ತಹಸಿಲ್ದಾರ್ ಕಚೇರಿ-08331-225482,-08331-225482, ಅಥಣಿ ತಹಶಿಲ್ದಾರ್ ಕಚೇರಿ-08289-251146, ನಿಪ್ಪಾಣಿ ತಹಸಿಲ್ದಾರ್ ಕಚೇರಿ-08338-220395.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.