ಕೆ.ಎನ್.ಪಿ.ವಾರ್ತೆ,ನವಲಿ,ಅ.29;

ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ಬೆಂಗಳೂರು, ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಕೊಪ್ಪಳ, ಉದ್ಯಮ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ನಿ., ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮೀಣಾಭಿವೃದ್ದಿ ಸಂಸ್ಥೆ ನವಲಿ
ಇವರುಗಳ ಸಂಯುಕ್ತಾಶ್ರಯದಲ್ಲಿ ಒಂದು ದಿನದ ವೈಜ್ಞಾನಿಕ ಕುರಿ ಸಾಕಾಣಿಕೆ ತರಬೇತಿ ಕಾರ್ಯಗಾರವನ್ನು ಜನನಿ ಪಬ್ಲಿಕ್ ಸ್ಕೂಲ್ಕ್ ನವಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ನವಲಿ ಉದ್ಯಮ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ವಿರುಪಣ್ಣ ಕಲ್ಲೂರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಕೊಪ್ಪಳ ಕರ್ನಾಟಕ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಸಹಾಯ ನಿರ್ದೇಶಕರಾದ ಡಾ.ಯಮನಪ್ಪ ಬಿ ಹೆಚ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಸ್ಥಾನವನ್ನು ಬಸವರಾಜ ಸ್ವಾಮಿ ಹಿರೇಮಠ ತಾಲೂಕ ಪಂಚಾಯತ ಸದಸ್ಯರು ಚಿಕ್ಕಡಂಕನಕಲ್ ಕ್ಷೇತ್ರ ಇವರು ವಹಿಸಿಕೊಂಡಿದ್ದರು. ಗಂಗಾವತಿ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಡಾ.ಮಲ್ಲಯ್ಯ ಕಾರ್ಯಗಾರದ ಉಪನ್ಯಾಸವನ್ನು ನೀಡಿದರು.

ವೈಜ್ಞಾನಿಕ ಕುರಿ ಸಾಕಾಣಿಕೆ ತರಬೇತಿ ಕಾರ್ಯಗಾರ

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕರುಗಳಾದ ಹನುಮಂತಪ್ಪ ಕಾರಟಗಿ ನವಲಿ, ಸತ್ಯ ನಾರಾಯಣ ಈಡಿಗೇರ, ನಿರುಪಾದೇಪ್ಪ ಆಗೋಲಿ, ರಾಮನಗೌಡ ಆದಪೂರ ಮುಖ್ಯೋಪಾಧ್ಯಾಯರು ಜನನಿ ಪಬ್ಲಿಕ್ ಶಾಲೆ ನವಲಿ, ಕುರಿಗಾರರು ಹಾಗೂ ರೈ ಸ್ವ ಸಹಾಯ ಸಂಘದ ಮಹಿಳೆಯರು ಭಾಗಿಯಾಗಿದ್ದರು.

ವರದಿ : ನವಲಿ ಸ್ವಾಮಿ

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.