ಕೆ.ಎನ್.ಪಿ.ವಾರ್ತೆ,ಮೈಸೂರು,ಏ.24;
ಬಿ.ವೈ.ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ್ದರಿಂದ ಕೊನೆ ಕ್ಷಣದಲ್ಲಿ ತೋಟದಪ್ಪ ಬಸವರಾಜಪ್ಪ ಅವರು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡಿರುವ ತೋಟದಪ್ಪ ಬಸವರಾಜಪ್ಪ ಅವರು ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ತೋಟದಪ್ಪ ಬಸವರಾಜಪ್ಪ ಇಂದು ನಂಜನಗೂಡಿನ ತಾಲ್ಲೂಕು ಕಚೇರಿಗೆ ತೆರಳಿ ‘ಬಿ’ ಪಾರಂ ಜೊತೆ ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸಿದರು.