ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.13;

ಗುಜರಾತ್ ಕರಾವಳಿಗೆ ‘ವಾಯು’ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ 500ಕ್ಕೂ ಹೆಚ್ಚು ಹಳ್ಳಿಗಳನ್ನು ತೆರವುಗೊಳಿಸಲಾಗಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗುಜರಾತ್ ಸರಕಾರ ತಿಳಿಸಿದೆ.

ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‌ನಿಂದ 280 ಕಿ.ಮೀ ಹಾಗೂ ಪೋರ್‌ಬಂದರ್‌ನಿಂದ 360 ಕಿ.ಮೀ ದೂರದಲ್ಲಿದೆ’ ಎಂದು ಗುಜರಾತ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಂಕಜ್ ಕುಮಾರ್ ತಿಳಿಸಿದರು.

ರಾಷ್ಟ್ರೀಯ ವಿಕೋಪ ನಿರ್ವಹಣಾ ಪಡೆಯ 36 ತಂಡಗಳನ್ನು ನಿಯೋಜಿಸಲಾಗಿದೆ. ಇನ್ನೂ 11 ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಎಸ್‌ಡಿಆರ್‌ಎಫ್‌ನ 9, ಎಸ್‌ಆರ್‌ಪಿಯ 14 ತಂಡಗಳು ಹಾಗೂ ನೌಕಾಪಡೆಯ 300 ಕಮಾಂಡೋಗಳನ್ನು ನಿಯೋಜಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.