ಕೆ.ಎನ್.ಪಿ.ವಾರ್ತೆ,ಮಂಗಳೂರು,ಸೆ.17;
ಮಂಗಳೂರಿನ ಲಾಡ್ಜ್ ವೊಂದರಲ್ಲಿ ಯುವತಿಯರನ್ನು ಗ್ರಾಹಕರಿಗೆ ಒದಗಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಲ್ಲಾಳಿ ಓರ್ವನನ್ನು ಸಿಸಿಬಿ ಪೊಲೀಸರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೊಡಗು ಜಿಲ್ಲೆ ವಿರಾಜಪೇಟೆಯ ದೀಪಕ್(43) ಎಂಬುದಾಗಿ ತಿಳಿದುಬಂದಿದೆ. ಅಲ್ಲದೇ ಇನ್ನು ಮೂವರು ದಲ್ಲಾಳಿಗಳಾದ ನಸೀರ್ ಉಪ್ಪಿನಂಗಡಿ, ನಸೀರ್ ಆಡ್ಯಾರ್ ಪದವು ಮತ್ತು ಜೀವನ್ ಪೂಜಾರಿ ಎಂಬುವರು ತಲೆಮರೆಸಿಕೊಂಡಿದ್ದಾರೆ.
ಇವರು ಈ ಸಿಟಿ ಲಾಡ್ಜ್ನಲ್ಲಿ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಂಡು ಹಣವನ್ನು ಗಳಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಮೂವರು ಯುವತಿಯರನ್ನು ಇದೀಗ ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.