ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.03;

ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಗ್ಗೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಪ್ರತಿಪಕ್ಷ ಕಾಂಗ್ರೆಸ್ ಆಡಿಯೋ ವಿಚಾರವನ್ನು ರಾಜಭವನಕ್ಕೆ ತಲುಪಿಸಿದ್ದು, ಸರ್ಕಾರವನ್ನು ವಜಾಗೊಳಿಸುವಂತೆ ಮನವಿ ಮಾಡಿದೆ.

ಕಾಂಗ್ರೆಸ್ – ಜೆಡಿಎಸ್ ನ ಅನರ್ಹ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿಟ್ಟಿದ್ದು ಸ್ವತಃ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಸಭೆಯಲ್ಲಿ ಹೇಳಿರುವ ವಿಡಿಯೋವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದೆ.

ಯಡಿಯೂರಪ್ಪ ಅವರ ಈ ಹೊಸ ವಿಡಿಯೋ ಇಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಗೆ ಈ ವಿಡಿಯೋ ಸಲ್ಲಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅಲ್ಲದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಸಹ ಈ ವಿಡಿಯೋವನ್ನು ಸುಪ್ರೀಂ ಕೊರ್ಟ್ ಗೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಂ ಕೋರ್ಟ್ ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.