ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.11;

ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ಅತೃಪ್ತ ಶಾಸಕರು ಇಂದು ಸಂಜೆ ಆರು ಗಂಟೆಗೆ ವಿಧಾನಸೌದದಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತಿತರರು ವಿಧಾನಸೌಧದ ಬಳಿ ಭದ್ರತೆಯನ್ನು ಪರಿಶೀಲಿಸಿದರು.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾರೆ. ನಿನ್ನೆ ಅತೃಪ್ತ ಶಾಸಕರನ್ನು ಭೇಟಿ ಮಾಡಲು ಯತ್ನಿಸಿದ್ದ ಡಿಕೆ ಶಿವಕುಮಾರ್ ಅವರಿಗೆ ಮಹಾರಾಷ್ಟ್ರ ಪೊಲೀಸರು ಹೋಟೆಲ್ ಪ್ರವೇಶಿಸಲು ಅನುಮತಿ ನೀಡಿರಲಿಲ್ಲ. 17 ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.