ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.04;

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳ ಬಸ್ ಪಾಸ್‌ಗಳ ಅವಧಿಯನ್ನು ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳು ಜೂನ್ 30ರ ತನಕ ಉಚಿತವಾಗಿ ಬಸ್‌ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಈಗಾಗಲೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು, 2018-19ರಲ್ಲಿ ವಿತರಣೆಯಾದ ಬಸ್ ಪಾಸುಗಳಲ್ಲಿ ವಿದ್ಯಾರ್ಥಿಗಳು ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಜೂನ್ 30ರ ತನಕ ಉಚಿತವಾಗಿ ಪ್ರಯಾಣ ಮಾಡಬಹುದು.

ಬಸ್‌ನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಬೋಧನ ರಶೀದಿ ಶುಲ್ಕ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಬೇಕು ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

2019-20 ನೇ ಸಾಲಿನ ಬಸ್ ಪಾಸುಗಳ ವಿತರಣೆ ಕುರಿತು ಶೀಘ್ರದಲ್ಲಿಯೇ ಕೆಎಸ್ಆರ್‌ಟಿಸಿ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ. ಹೊಸ ಪಾಸು ಪಡೆಯುವ ತನಕ ಹಳೆಯ ಪಾಸ್‌ನಲ್ಲಿಯೇ ಸಂಚಾರ ನಡೆಸಬಹುದು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.