ಕೆ.ಎನ್.ಪಿ.ವಾರ್ತೆ,ರಾಂಗೈ,ಜು.09;

ಅಸ್ಸಾಂ ರಾಜ್ಯದ ಕಾಮರೂಪ ಜಿಲ್ಲೆಯಲ್ಲಿ ವಿಷ ಪ್ರಸಾದ ಸೇವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ 150 ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಉತ್ತರ ಗುವಾಹಟಿ ಬಳಿ ಲೆಂಗಾಹಳ್ಳಿ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಈ ದುರ್ಘಟನೆ ನಡೆದಿದೆ ಎಂದು ಗ್ರಾಮದ ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಸಾದ ಸೇವಿಸಿದ ಬಳಿಕ ಹೊಟ್ಟೆನೋವು, ವಾಂತಿ, ಬೇದಿ ಕಾಣಿಸಿಕೊಂಡಿದ್ದು, ಅಮಂಗಾನ್ ಸರ್ಕಾರಿ ಆಸ್ಪತ್ರೆಗೆ 150 ಮಂದಿಯನ್ನು ದಾಖಲಿಸಲಾಗಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಗುವಾಹಟಿಯ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.