ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.12;

ಬಂಡಾಯ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತಿಲ್ಲ, ಮಂಗಳವಾರದವರೆಗೂ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಸಂತಾಪ ಸೂಚನೆ ವೇಳೆಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಭಾಧ್ಯಕ್ಷರೆ, ರಾಜ್ಯದಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡುವ ಮೂಲಕ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ, ಈ ಸ್ಥಾನವನ್ನು ದುರುಪಯೋಗ ಪಡಿಸಿಕೊಳ್ಳಲು ನನಗಿಷ್ಟವಿಲ್ಲ. ಸದನದ ಬೆಂಬಲ ಇದ್ದಾಗ ಮಾತ್ರ ನಾನು ಈ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ನಾನು ಸ್ವಪ್ರೇರಣೆಯಿಂದ ಬಹುಮತ ಸಾಬೀತುಪಡಿಸಲು ಮುಂದಾಗಿದ್ದೇನೆ. ಹೀಗಾಗಿ, ಸಮಯವನ್ನು ನಿಗದಿಪಡಿಸುವಂತೆ ಕೋರಿದ್ದೇನೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.