ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.11;

ತಾಲೂಕಿನ ಡಣಾಪುರ ಗ್ರಾಮಪಂಚಾಯತಿ ಸಂಯುಕ್ತಾಶ್ರಯದಲ್ಲಿ ಸರಕಾರಿ ಶಾಲಾ ಆವರಣದಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ ಹಾಗೂ ಸ್ವಚ್ಛ ಮೇವ ಜಯತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯನಿರ್ವಾಹಕ ಅಧಿಕಾರಿಗಳಾದ (ಇಒ) ಶ್ರೀ ಲಕ್ಷ್ಮಿಪತಿ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪರಿಸರ ದಿನಾಚರಣೆಯಷ್ಟೇ ನಮ್ಮ ಕಾರ್ಯವಾಗಬಾರದು ಇದು ನಮ್ಮ ಕರ್ತವ್ಯವಾಗಬೇಕು. ದಿನನಿತ್ಯ ನಾವು ಪರಿಸರ ಬೆಳೆಸುವದರ ಜೊತೆಯಲ್ಲಿ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛಗೊಳಿಸಬೇಕು. ಇದು ಬರಿ ಆಚರಣೆಯಾಗಬಾರದು ಎಂದರು.

ಬಳಿಕ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಾಗೂ ಶಾಲಾ ಆವರಣದಲ್ಲಿ ಸಸಿ ನೆಡಲಾಯಿತು. ಇದೇ ವೇಳೆ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛ ಮೇವ ಜಯತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ವೇಳೆ ತಾಲೂಕ ಪಂಚಾಯತ್ ಸದಸ್ಯರಾದ ಫಕೀರಯ್ಯ, ಅರಣ್ಯ ಇಲಾಖೆಯ ನಾಗರಾಜ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬೀರಲಿಂಗಪ್ಪ, ಪಿಡಿಒ ಶಂಷಿರ್ ಅಲಿ ಹಾಗೂ ಹರೀಶ್, ಉಪಾಧ್ಯಕ್ಷರಾದ ಶ್ರೀಮತಿ ಅಂಬ್ರಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ, ಶಿಕ್ಷಕರು ಹಾಗೂ ಗ್ರಾಮದ ಮುಖಂಡರಾದ ಮಲ್ಲನಗೌಡ, ಅಯ್ಯಪ್ಪ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಯುವಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

ವರದಿ : ಹನುಮೇಶ್ ಭಾವಿಕಟ್ಟಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.