ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.03;

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು, ಶನಿವಾರದಿಂದ ಆಗಾಗ ತುಂತುರು ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗಿನಿಂದಲೇ ಚಳಿಯ ಜೊತೆಗೆ ಮೋಡ ಕವಿದ ವಾತಾವರಣವಿದ್ದು, ತಾಪಮಾನ 22ºಅ , ಗಾಳಿ 3.7 , ತೇವಾಂಶ 0.84 ದಾಖಲಾಗಿದೆ.

ತಮಿಳುನಾಡಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಕಾರಣ ಕೂಡ ಬೆಂಗಳೂರು ಹವಾಮಾನದ ಮೇಲೆ ಪರಿಣಾಮ ಬೀರಿದೆ. ಮಧ್ಯಾಹ್ನ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದೆ ಬಿಟ್ಟು ಬಿಟ್ಟು ತುಂತುರು ಮಳೆ ಬರಲಿದ್ದು, ಸಂಜೆಯ ವೇಳೆಗೆ ಮಳೆ ನಿಲ್ಲಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರ ಮತ್ತು ಹಿಂದೂ ಮಹಾಸಾಗರದ ನಡುವೆ ಉಂಟಾದ ವಾಯುಭಾರ ಕುಸಿತ ಚಂಡುಮಾರುತವಾಗಿ ಬದಲಾಗಿದ್ದು ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.