ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09;

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು.

ಇದರಂತೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಇಂದು ಮಧ್ಯಾಹ್ನದ ಹೊತ್ತಿಗೆ ಆಯಾ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಲ್ಲರು ಎಂಬುದರ ಸ್ಪಷ್ಟ ಚಿತ್ರಣ ತಿಳಿದುಬರಲಿದೆ. ಹೀಗಾಗಿ ಅನರ್ಹ ಶಾಸಕರಲ್ಲಿ ಆತಂಕ ಮತ್ತು ಕುತೂಹಲ ಹೆಚ್ಚಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅನರ್ಹ ಶಾಸಕ ಶಿವರಾಂ ಹೆಬ್ಬಾರ್ ಆರಂಭದ ಸುತ್ತಗಳ ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಡಿ. 5ರಂದು ನಡೆದ ಮತದಾನದಲ್ಲಿ ಇಲ್ಲಿ ಶೇ 77ರಷ್ಟು ಮತದಾನ ನಡೆದಿತ್ತು.

ಬಿಜೆಪಿಯ ಶಿವರಾಂ ಹೆಬ್ಬಾರ್, ಕಾಂಗ್ರೆಸ್‌ನ ಭೀಮಣ್ಣ ನಾಯ್ಕ್ ಮತ್ತು ಜೆಡಿಎಸ್‌ನ ಚೈತ್ರಾ ಗೌಡ ಕಣದಲ್ಲಿರುವ ಪ್ರಮುಖ ಸ್ಪರ್ಧಾಳುಗಳು.

ಕರ್ನಾಟಕ ರಾಷ್ಟ್ರ ಸಮಿತಿಯ ಜೈತನುಬಿ ಜಿಗಳೂರು, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಸ್ವತಂತ್ರ ಅಭ್ಯರ್ಥಿಗಳಾದ ಚಿದಾನಂದ ಹನುಮಂತಪ್ಪ ಹರಿಜನ ಮತ್ತು ಮಹೇಶ್ ಹೆಗ್ಡೆ ಕಣದಲ್ಲಿರುವ ಇತರೆ ಸ್ಪರ್ಧಿಗಳು.

ಅಂಚೆ ಮತ ಎಣಿಕೆಯಲ್ಲಿ 98 ಮತಗಳ ಮುನ್ನಡೆ ಪಡೆದುಕೊಂಡಿರುವ ಬಿಜೆಪಿಯ ಶಿವರಾಂ ಹೆಬ್ಬಾರ್, ನಂತರದ ಸುತ್ತುಗಳಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರನೇ ಸುತ್ತಿನ ಮತ ಎಣಿಗೆಯ ಬಳಿಕ 26,285 ಮತಗಳನ್ನು ಪಡೆದುಕೊಂಡಿರುವ ಹೆಬ್ಬಾರ್, 12,338 ಮತಗಳಿಂದ ಭಾರಿ ಮುನ್ನಡೆ ಪಡೆದುಕೊಂಡಿದ್ದಾರೆ. 10 ನೇ ಸುತ್ತಿನ ಮತ ಎಣಿಕೆ ಮುಕ್ತಾಯದ ಬಳಿಕವೂ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. 19738 ಮತಗಳ ಮುನ್ನಡೆ ಅವರಿಗೆ ಸಿಕ್ಕಿದೆ.

ಶಿವರಾಮ್ ಹೆಬ್ಬಾರ್ – 47531, ಭೀಮಣ್ಣ ನಾಯ್ಕ – 27793, ಚೈತ್ರಾ ಗೌಡ – 867 ಮತಗಳನ್ನು ಪಡೆದಿದ್ದರೆ, 1069 ನೋಟಾ ಮತಗಳು ಚಲಾವಣೆಯಾಗಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.