ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.06;

ಅತ್ತಿಬೆಲೆಯಲ್ಲಿನ ನಿರ್ಜನ ಪ್ರದೇಶವೊಂದರಲ್ಲಿ 35 ವರ್ಷದ ಯುವಕನೋರ್ವನ ಅಪರಿಚಿತ ಶವ ಕಳೆದ ರಾತ್ರಿ ಪತ್ತೆಯಾಗಿದೆ. ಆತ ಕೆಲಸಕ್ಕಾಗಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟ ಯುವಕ ಈ ಹಿಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಗ್ಗೆ ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ದುಷ್ಕರ್ಮಿಗಳು ಕಲ್ಲಿನಿಂದ ತಲೆ ಜಜ್ಜಿದ್ದು, ಮೃತದೇಹವನ್ನು ನಂಜುಂಡಪ್ಪ ಲೇಔಟ್ ನಲ್ಲಿ ಎಸೆಯಲಾಗಿದೆ.

ರಕ್ತದ ಮಡುವಿನಲ್ಲಿ ಬಿದಿದ್ದ ಮೃತದೇಹವನ್ನು ನೋಡಿದ ದೇವಾಲಯದ ಆರ್ಚಕರೊಬ್ಬರು ಅತ್ತಿಬೆಲೆ ಪೊಲೀಸರಿಗೆ ದೂರು ನೀಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂಬ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.