ಕೆ.ಎನ್.ಪಿ.ವಾರ್ತೆ,ಬಾಗಲಕೋಟೆ,ಅ.31;

ಪ್ರವಾಹ ಹಾಗೂ ಇತ್ತೀಚಿಗೆ ಸುರಿದ ಭಾರೀ ಮಳೆಯ ಪರಿಣಾಮವಾಗಿ ನೆನೆದಿದ್ದ ಮನೆಯ ಮೇಲ್ಛಾವಣಿ ಕುಸಿದು ಮಗುವೊಂದು ಸಾವನಪ್ಪಿ, ತಾಯಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ಸಂಭವಿಸಿದೆ.

ಅಚಲ ಭುಜಬುಲಿ ತಿಮ್ಮಣ್ಣವರ 11 ತಿಂಗಳ ಮಗು ಮೇಲ್ಛಾವಣಿ ಕುಸಿತಕ್ಕೆ ಸ್ಥಳದಲ್ಲಿ ಸಾವನ್ನಪ್ಪಿದೆ. ತಾಯಿ ಅರ್ಚನ ಭುಜಬುಲಿ ತಿಮ್ಮಣ್ಣವರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಕೆ ಎಲ್ ಇ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬುಧವಾರ ರಾತ್ರಿ ಮನೆಯಲ್ಲಿ ನಾಲ್ವರು ಮಲಗಿದ್ದರು. ಇಂದು ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಇಬ್ಬರು ಎದ್ದು ಹೊರಗಡೆ ಬಂದಿದ್ದರು. ಆದರೆ ತಾಯಿ, ಮಗು ಇನ್ನೂ ಮಲಗಿದ್ದರು. ಈ ವೇಳೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಮಗು ಮೃತಪಟ್ಟಿದ್ದು, ತಾಯಿಗೆ ಗಂಭೀರ ಗಾಯಗಳಾಗಿದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.