ಕೆ.ಎನ್.ಪಿ.ವಾರ್ತೆ,ರಾಂಚಿ,ನ.30;

jharkhand assembly election (ಜಾರ್ಖಂಡ್ ವಿಧಾನಸಭೆ ಚುನಾವಣೆ 2019) ರ ಮೊದಲ ಹಂತದ ಮತದಾನ ಆರಂಭವಾಗಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಛಾತ್ರ, ಗುಮ್ಲಾ, ಬಿಶುನ್‌ಪುರ, ಲೋಹರ್‌ದಾಗ, ಮಾನಿಕಾ, ಲತೇಹರ್, ಪಂಕಿ, ಡಾಲ್ಟೋಂಗಂಜ್, ಬಿಶ್ರಾಂಪುರ, ಛಾತರೊರ್, ಹುಸೇನಾಬಾದ್, ಗರ್ಹ್ವಾ ಮತ್ತು ಭವಾನಾಥ್ ಪುರ್ ನಲ್ಲಿ ಇಂದು ಮತದಾನ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೂ ಮತದಾನ ನಡೆಯಲಿದ್ದು, ಮತದಾನಕ್ಕಾಗಿ ಕೇಂದ್ರ ಚುನಾವಣಾ ಆಯೋಗ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.

ಇಂದಿನ ಮತದಾನದಲ್ಲಿ ಒಟ್ಟು 37,83,055 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಈ ಪೈಕಿ 18,01,356 ಮಹಿಳಾ ಮತದಾರರೂ ಸೇರಿದ್ದಾರೆ. ಒಟ್ಟು 13 ಕ್ಷೇತ್ರಗಳಲ್ಲಿ 189 ಮಂದಿ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದು, ಈ ಪೈಕಿ 15 ಮಂದಿ ಮಹಿಳಾ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

4,892 ಮತದಾನ ಕೇಂದ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, 1202 ಸೂಕ್ಷ್ಮ ಹಾಗೂ 1790ಅತೀ ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ.

ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವಣೆ (jharkhand assembly election) 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.