ಕೆ.ಎನ್.ಪಿ.ವಾರ್ತೆ,ಶ್ರೀನಗರ,ಜ.01;

ಹೊಸವರ್ಷದ ದಿನದಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿರುವ ಘಟನೆ ರಜೌರಿ ಜಿಲ್ಲೆಯ ನೌಶೆರಾದಲ್ಲಿ ಬುಧವಾರ ನಡೆದಿದೆ.

ನೌಶೆರಾ ದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದಿದ್ದ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಭಾರತೀಯ ಯೋಧರು ವೀರಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.