ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.31;

ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿದೆ.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ಆಧಾರದ ಮೇರೆಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಂದಿನ 6 ತಿಂಗಳ ಅವಧಿವರೆಗೆ ಅಥವಾ ಮುಂದಿನ ಸರ್ಕಾರದ ಆದೇಶದವರೆಗೆ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.

ಬರಪೀಡಿತ ಪ್ರದೇಶಗಳು :

ಬೆಂಗಳೂರು ನಗರ 

ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ

ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ

ರಾಮನಗರ ಜಿಲ್ಲೆ

ಕನಕಪುರ, ರಾಮನಗರ

ಕೋಲಾರ ಜಿಲ್ಲೆ

ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ 

ಚಿಕ್ಕಬಳ್ಳಾಪುರ

ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ

ತುಮಕೂರು

ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುಮಕೂರು, ತುರುವೇಕೆರೆ

ಚಿತ್ರದುರ್ಗ

ಚಳ್ಳಕೆರೆ, ಚಿತ್ರದುರ್ಗ, ಮೊಳಕಾಲ್ಮೂರು

ದಾವಣಗೆರೆ

ಜಗಳೂರು

ಚಾಮರಾಜನಗರ

ಕೊಳ್ಳೆಗಾಲ

ಬಳ್ಳಾರಿ

ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ

ಕೊಪ್ಪಳ

ಗಂಗಾವತಿ

ರಾಯಚೂರು

ಮಾನ್ವಿ, ರಾಯಚೂರು, ಸಿಂಧನೂರು

ಕಲಬುರಗಿ

ಚಿಂಚೋಳಿ, ಜೇವರ್ಗಿ, ಸೇಡಂ

ಯಾದಗಿರಿ

ಯಾದಗಿರಿ ತಾಲೂಕು

ಬೆಳಗಾವಿ

ಅಥಣಿ

ಬಾಗಲಕೋಟೆ

ಬಾದಾಮಿ, ಬೀಳಗಿ, ಜಮಖಂಡಿ

ವಿಜಯಪುರ

ಬಸವನಬಾಗೇವಾಡಿ, ಇಂಡಿ, ಸಿಂಧಗಿ, ವಿಜಯಪುರ

ಗದಗ 

ನರಗುಂದ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.