ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ12;

ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದ್ದು, ಸರ್ಕಾರಿ ಆದೇಶ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ.

ಇದರಿಂದಾಗಿ ಜೂನ್ 22ರ ನಾಲ್ಕನೇ ಶನಿವಾರ ಸರ್ಕಾರಿ ರಜೆಯಾಗಲಿದೆ. ಇನ್ನು ಪ್ರತಿ ತಿಂಗಳ ನಾಲ್ಕನೇ ಶನಿವಾರ ಸರ್ಕಾರಿ ರಜೆ ಎಂದು ಘೋಷಿಸಲಾಗಿದೆ.

” ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಪ್ರತಿತಿಂಗಳ ನಾಲ್ಕನೇ ಶನಿವಾರವನ್ನು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಘೋಷಿಸಿದೆ. ಪ್ರಸ್ತುತ ಸರ್ಕಾರಿ ನೌಕರರಿಗೆ ಇರುವ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ” ಎಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.