ಕೆ.ಎನ್.ಪಿ.ವಾರ್ತೆ,ಕಲಬುರಗಿ,ಡಿ.11;

2019ರ ಜನವರಿಯಿಂದ ನವೆಂಬರ್ ವರೆಗೆ ರಾಜ್ಯದಲ್ಲಿ ಸುಮಾರು 612 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೃಷಿ ಇಲಾಖೆ ನಿರ್ದೇಶಕ ಬಿವೈ ಶ್ರೀನಿವಾಸ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಾಜ್ಯಾದ್ಯಂತ 612 ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. 110 ಕೇಸ್ ಗಳಿಗೆ ಪರಿಹಾರ ತಿರಸ್ಕರಿಸಿಲಾಗಿದೆ, ಇನ್ನು 359 ಕೇಸ್ ಗಳಿಗೆ ಪರಿಹಾರ ನೀಡಲಾಗಿದೆ, 124 ಪ್ರಕರಣಗಳು ಅನುಮೋದನೆಗಾಗಿ ಕಾಯುತ್ತಿವೆ, 21 ಕೇಸ್ ಗಳ ವಿಧಿ ವಿಜ್ಞಾನ ಪ್ರಯೋಗಾಲಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಹೇಳಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ, ಬೆಳಗಾವಿ ಜಿಲ್ಲೆಯಲ್ಲೇ ಅತಿ ಹೆಚ್ಚಿನ ಆತ್ಮಹತ್ಯೆ ದಾಖಲಾಗಿದೆ, ಅದರಲ್ಲಿ 37 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 18 ಪ್ರಕರಣಗಳಿಗೆ ಪರಿಹಾರ ತಿರಸ್ಕರಿಸಲಾಗಿದೆ.

ಮೈಸೂರು ಮತ್ತು ಧಾರವಾಡಗಳಲ್ಲಿ ತಲಾ 51 ಮಂದಿ ಸಾವಿಗೆ ಶರಣಾಗಿದ್ದಾರೆ, ಮೈಸೂರಲ್ಲಿ 3 ಹಾಗೂ ಧಾರವಾಡದ 19 ಕೇಸ್ ಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.