ಕೆ.ಎನ್.ಪಿ.ವಾರ್ತೆ,ಮಡಿಕೇರಿ,ಜೂ.15;

ಜಿಲ್ಲೆಯ ಕೆ ನಿಡುಗರಿ ಗ್ರಾಮ ಪಂಚಾಯತ್ ವ್ಯಾಪ್ತಿಯ 800 ಮರಗಳನ್ನು ಅನಧಿಕೃತವಾಗಿ ಕಡಿಯಲು ಅನುಮತಿ ನೀಡಿ, ಕರ್ತವ್ಯಲೋಪ ಎಸಗಿದ ಆರೋಪದಡಿ ಕೊಡಗು ಅರಣ್ಯ ಉಪ ಸಂರಕ್ಷಣಾಧಿಕಾರಿ ಎಂ ಮಂಜುನಾಥ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

800 ಮರಗಳನ್ನು ಅನಧಿಕೃತವಾಗಿ ಕಡಿಯಲು ಮಂಜುನಾಥ್ ಅನುಮತಿ ನೀಡಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ಮಂಜುನಾಥ್ ಅವರನ್ನು ಅಮಾನತು ಮಾಡಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ, ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿದು ಹಾಕಿದ್ದಕ್ಕೆ ಸಂಬಂಧಿಸಿದ ಮಾಧ್ಯಮದ ವರದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಖೇದ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.